ದಕ್ಷಿಣ ಕನ್ನಡ:
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಚುನಾವಣಾ ಕಾವು ರಂಗೇರಿದೆ. ಮೂರನೇ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ನಳಿನ್ಕುಮಾರ್ ಕಟೀಲ್ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬಿಜೆಪಿ ಚುನಾವಣಾ ಕಚೇರಿ ಬಳಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ಬಿಜೆಪಿ ಶಾಸಕರು,ಪರಿಷತ್ ಸದಸ್ಯರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಸಮಾವೇಶದ ಬಳಿಕ ಡಿಸಿ ಕಚೇರಿಗೆ ತೆರಳಿ ನಳೀನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಸಲಿದ್ದಾರೆ.