Breaking News

3 ತಿಂಗಳ ಬಾಡಿಗೆ ವಿನಾಯಿತಿ ಘೋಷಿಸಿ, ಮೋದಿಗೆ ಎಚ್‌ಡಿಕೆ ಮನವಿ..!

ಟ್ವಿಟ್ಟರ್‌ನಲ್ಲಿ ವಿನಂತಿ ಮಾಡಿರುವ ಎಚ್‌ಡಿಕೆ....

SHARE......LIKE......COMMENT......

ಬೆಂಗಳೂರು:

ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಲಾಕ್‌ಡೌನ್‌ ಜಾರಿಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಮೂರು ತಿಂಗಳ ಬಾಡಿಗೆ ವಿನಾಯಿತಿಯನ್ನು ಘೋಷಣೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿನಂತಿ ಮಾಡಿಕೊಂಡಿದ್ದಾರೆ.

ಟ್ವಿಟ್ಟರ್‌ನಲ್ಲಿ ವಿನಂತಿ ಮಾಡಿರುವ ಅವರು ಅನೇಕ ದೇಶಗಳು ಬಾಡಿಗೆ ವಿನಾಯಿತಿ ಕ್ರಮಗಳನ್ನು ಘೋಷಣೆ ಮಾಡಿದೆ. ಅದರಂತೆ ರಾಜ್ಯದಲ್ಲೂ ಘೋಷಸಲು ಮನವಿ ಮಾಡಿಕೊಂಡಿದ್ದಾರೆ. “ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕರೋನ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಪ್ರಧಾನಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ……