Breaking News

6 ಜನ ಗಾಂಜಾ ಸಪ್ಲೈರ್ಸ್ ಅರೆಸ್ಟ್​..!

5 ಕೆಜಿ ಗಾಂಜಾ ವಶಪಡಿಸಿಕೊಂಡ ಪೊಲೀಸರು....

SHARE......LIKE......COMMENT......

ನೆಲಮಂಗಲ:
ನೆಲಮಂಗಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಇನ್ಸ್​​ಪೆಕ್ಟರ್​​ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ 5 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಇನ್ನು ಹೆಚ್ಚಿನ ತನಿಖೆ ನಡೆಸಲು ಪೊಲೀಸರ ತಂಡ ವಿಶಾಖಪಟ್ಟಣಕ್ಕೆ ತೆರಳಿದ್ದು, ಗಾಂಜಾ ಮಾರಾಟಗಾರರ ಕಿಂಗ್ ಪಿನ್ ಅನ್ನು ಸೆರೆಹಿಡಿಯಲು ಬಲೆ ಬೀಸಿದ್ದಾರೆ….