Breaking News

ರೈತರ ಸಾಲ ಮನ್ನಾ..!

ನವೆಂಬರ್‌ 1 ರಿಂದ ಹಣ ಬಿಡುಗಡೆ....

SHARE......LIKE......COMMENT......

ಬೆಂಗಳೂರು:

ರೈತರ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲದ ಕೊಡಿ ಹಣ ತುಂಬುತ್ತೇವೆ ಎಂದು ಹೇಳಿದರೂ ಮಾಹಿತಿ ಕೊಡುತ್ತಿಲ್ಲ. ನಾನು ಏನು ಮಾಡಬೇಕು ಎಂದು ಪ್ರಶ್ನಿಸಿದರು.

ನವೆಂಬರ್‌ 1 ರಿಂದ ಹಣ ಬಿಡುಗಡೆ ಮಾಡಲಾಗುವುದು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದಿರುವ ರೈತರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಘೋಷಿಸಿರುವಂತೆ ಮನ್ನಾ ಆಗಲಿದೆ ಎಂದು ಹೇಳಿದರು.

ಬಿಜೆಪಿಯವರು ಸಾಲ ಮನ್ನಾಗೆ ಕೇಂದ್ರದಿಂದ ಒಂದು ರೂಪಾಯಿ ತರಲು ಆಗುತ್ತಿಲ್ಲ. ಕೊನೇ ಪಕ್ಷ ಅಪಪ್ರಚಾರ ಮಾಡುವುದನ್ನು ನಿಲ್ಲಿಸಲಿ. ಬ್ಯಾಂಕುಗಳಿಂದ ಮಾಹಿತಿ ತರಿಸಿಕೊಟ್ಟರೆ ನಾನು ಅಬಾರಿ ಎಂದು ಹೇಳಿದರು.ನಾವು ಸಾಲ ಮನ್ನಾ ಮಾಡಲು ಸಿದ್ಧರಿದ್ದೇವೆ. ರಿಸರ್ವ್‌ ಬ್ಯಾಂಕ್‌ ಕಡೆಯಿಂದ ನಿರ್ದೇಶನ ಕೊಡಿಸಿ ಮಾಹಿತಿ ಕೊಡಬೇಕು. 6500 ಕೋಟಿ ರೂ. ಸಾಲ ಮನ್ನಾಗೆ ಇಡಲಾಗಿದ್ದು ನವಂಬರ್‌ 1 ರಿಂದ ಹಂತ ಹಂತವಾಗಿ ಬ್ಯಾಂಕ್‌ಗಳಿಗೆ ಬಿಡುಗಡೆ ಮಾಡಲಾಗುವುದು.

ರಾಷ್ಟ್ರೀಕೃತ ಬ್ಯಾಂಕ್‌ಗಳು ಪ್ರಧಾನಿ ಮೋದಿ ಹಾಗೂ ಹಣಕಾಸು ಸಚಿವ ಅರುಣ್‌ ಜೇಟ್ಲಿ ವ್ಯಾಪ್ತಿಗೆ ಬರುತ್ತವೆ. ಡೇಟಾ ಬೇಸ್‌ ಕೊಡಿಸುವ  ಕೆಲಸವನ್ನು ಬಿಜೆಪಿಯವರು ಮಾಡಲಿ. ಸರ್ಕಾರದಲ್ಲಿ ಹಣಕಾಸಿನ ಸಮಸ್ಯೆಯಿಲ್ಲ. ಬ್ಯಾಂಕುಗಳು ತಿಳುವಳಿಕೆ ಪತ್ರ ಕೊಟ್ಟಿದ್ದಾರೆ. ಬ್ಯಾಂಕುಗಳ ಬಳಿ ಮಾಹಿತಿ ಪಡೆಯಲು ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದು ಹೇಳಿದರು……