Breaking News

ಕರ್ನಾಟಕದ ಹಲವೆಡೆ 4 ದಿನ ಭಾರೀ ಮಳೆ..!

ಹವಾಮಾನ ಇಲಾಖೆ ಮುನ್ಸೂಚನೆ....

SHARE......LIKE......COMMENT......

ಬೆಂಗಳೂರು:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಅ. 10ರಿಂದ 13ರವರೆಗೂ ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ. ಈ ಮೂರು ಜಿಲ್ಲೆಗಳಲ್ಲಿ ಅ. 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಮಳೆ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಮಹಾರಾಷ್ಟ್ರದಲ್ಲಿಯೂ ಮಳೆ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ನಿನ್ನೆಯಿಂದಲೇ ಮಳೆ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ……