ಬೆಂಗಳೂರು:
ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅಳಿಯ ಕನ್ನಡದ ಹಿರಿಯ ನಟ ಶಕ್ತಿ ಪ್ರಸಾದ್ ಮೊಮ್ಮಗ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ನಿನ್ನೆ ಶನಿವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಯನಗರದ ಸಾಗರ್ ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು ಎಂದು ಮೂಲಗಳು ವರದಿ ಮಾಡಿವೆ.ಚಿರಂಜೀವಿಯ ಸರ್ಜಾ ಗಂಟಲಿನ ದ್ರವ ತೆಗೆದು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ 2017ರಲ್ಲಿ ನಟಿ ಮೇಘನಾ ರಾಜ್ ಜತೆ ನಿಶ್ಚಿತಾರ್ಥ ಮಾಡಿ, 2018ರಲ್ಲಿ ಈ ಜೋಡಿ ಮದುವೆಯಾಗಿದ್ದರು.