Breaking News

ಚಿತ್ರರಂಗದ ಕಹಿ ಸತ್ಯದ ಬಗ್ಗೆ ಮೌನ ಮುರಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ..!

ಸಿನಿಮಾರಂಗದ ಮತ್ತೊಂದು ಮುಖ ಬಿಚ್ಚಿಟ್ಟ ಸ್ಯಾಂಡಲ್‌ವುಡ್‌ ತಾರೆ....

SHARE......LIKE......COMMENT......

ಬೆಂಗಳೂರು:

ನಟಿ ರಮ್ಯಾ ಸಿನಿಮಾರಂಗಕ್ಕೆ ಸಂಬಂಧಪಟ್ಟ ವಿಚಾರಗಳ ಕುರಿತು ಆಗಾಗ ಮಾತನಾಡುತ್ತಿರುತ್ತಾರೆ. ಇದೀಗ ಸಿನಿಮಾರಂಗದ ಮತ್ತೊಂದು ಮುಖದ ಬಗ್ಗೆ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಇರುವ ಲಿಂಗ ತಾರತಮ್ಯದ ಬಗ್ಗೆ ರಮ್ಯಾ ಮಾತನಾಡಿದ್ದು, ನಟರಿಗೆ ಇರುವ ಮಾನ್ಯತೆ, ನಟಿಯರಿಗೆ ಇಲ್ಲ ಎಂಬ ವಿಚಾರದ ಬಗ್ಗೆ ತಮ್ಮ ಮೌನ ಮುರಿದಿದ್ದಾರೆ. ಸಿನಿಮಾರಂಗದಲ್ಲಿನ ಲಿಂಗ ತಾರತಮ್ಯದ ಬಗ್ಗೆ ರಮ್ಯಾ ಪೋಸ್ಟ್ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್‌ ಆಕ್ಟಿವ್‌ ಆಗಿರುವ ಸ್ಯಾಂಡಲ್‌ವುಡ್‌ ಮೋಹಕ ತಾರೆ ರಮ್ಯಾ, ಇದೀಗ ಚಿತ್ರರಂಗದ ಕಹಿ ಸತ್ಯದ ಬಗ್ಗೆ ಮೌನ ಮುರಿದಿದ್ದಾರೆ.

ನಟಿ ರಮ್ಯಾ ಅವರು ಹಲವು ವಿಷಯಗಳ ಕುರಿತು ಪ್ರತಿಕ್ರಿಯಿಸುತ್ತಾರೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿರುವ ನಟಿ ರಮ್ಯಾ, ಸಿನಿಮಾರಂಗ ಹೇಗಿದೆ? ಇಲ್ಲಿ ನಟಿಯರನ್ನು ಯಾವ ರೀತಿ ಅಳೆಯಲಾಗುತ್ತೆ? ಎಂಬ ವಿಚಾರಗಳ ಬಗ್ಗೆ ಮೌನ ಮುರಿದಿದ್ದಾರೆ. ಈ ಮೂಲಕ ಬಣ್ಣದ ಜಗತ್ತಿನ ಕಹಿ ಸತ್ಯದ ಕುರಿತು ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಮಿಂಚಬೇಕು ಎಂದು ಕನಸು ಕಂಡಿದ್ದ ಯುವನಟಿ ಚೇತನಾ ರಾಜ್ (22) ನಿಧನರಾಗಿದ್ದು ನೋವಿನ ಸಂಗತಿ. ಮೇ 17ರಂದು ಅವರು ಫ್ಯಾಟ್​ ಸರ್ಜರಿ ವೈಫಲ್ಯದಿಂದ ವಿಧಿವಶರಾದರು. ಈ ಘಟನೆ ಕುರಿತು ನಟಿ ರಮ್ಯಾ ಇದೀಗ ಪ್ರತಿಕ್ರಿಯಿಸಿದ್ದಾರೆ.

“ಪುರುಷನಾದವನು ಡೊಳ್ಳುಹೊಟ್ಟೆ ಇಟ್ಟುಕೊಂಡು, ತಲೆಕೂದಲು ಉದುರಿ ಹೋಗಿ ವಿಗ್​ ಹಾಕಿಕೊಂಡರೂ ಹೀರೋ ಅಂತ ಪರಿಗಣಿಸಲಾಗುತ್ತದೆ. ಮುಖದಲ್ಲಿ ಒಂದೊಂದು ಗಲ್ಲ 5 ಕೆಜಿ ಇದ್ದರೂ ಸಮಸ್ಯೆಯಿಲ್ಲ. 65 ವರ್ಷವಾದರೂ ಅವರು ಹೀರೋ. ಆದರೆ ಇದೇ ತೂಕ ಹೆಚ್ಚಿಸಿಕೊಂಡರೆ ಆಂಟಿ, ಬುಡ್ಡಿ, ಅಜ್ಜಿ ಎಂದು ಕರೆಯುತ್ತಾರೆ. ಪ್ಲಾಸ್ಟಿಕ್​ ಸರ್ಜರಿ ಬಳಿಕ ಮೃತರಾದ ಯುವ ನಟಿಯ ಬಗ್ಗೆ ಸುದ್ದಿ ಓದಿ ತಿಳಿದುಕೊಂಡೆ. ಮಹಿಳೆಯರ ಮೇಲೆ ಅಸಹಜವಾದ ಬ್ಯೂಟಿ ಸ್ಟ್ಯಾಂಡರ್ಡ್​ಗಳನ್ನು ಹೇರಲಾಗುತ್ತೆ. ಯಾವ ರೀತಿ ಕಾಣಬೇಕು ಎಂಬ ಬಗ್ಗೆ ಮಹಿಳೆಯರ ಮೇಲೆ ತೀವ್ರ ಒತ್ತಡ ಇದೆ” ಎಂದು ರಮ್ಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“2018ರಲ್ಲಿ ಕಾಲಿನ ಟ್ಯೂಮರ್​ ರಿಮೂವಲ್​ ಬಳಿಕ ನಾನು ಕೂಡ ದೇಹದ ತೂಕದ ಸಮಸ್ಯೆ ಅನುಭವಿಸಿದೆ. ನಾನು ನನ್ನದೇ ಆದ ಮಾರ್ಗದ ಮೂಲಕ ತೂಕ ಇಳಿಸಿಕೊಂಡೆ. ಮಹಿಳೆ ಹೇಗಿರಬೇಕು ಎಂದು ಜಗತ್ತು ಹೇಳುವುದು ಬೇಡ. ಸಿನಿಮಾ ಇಂಡಸ್ಟ್ರಿ ಬದಲಾಗಬೇಕು. ಸಂಭಾವನೆ ತಾರತಮ್ಯ, ಬ್ಯೂಟಿ ಸ್ಟ್ಯಾಂಡರ್ಡ್​, ಪಾತ್ರಗಳ ತಾರತಮ್ಯದ ವಿರುದ್ಧ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಹೋರಾಡಬೇಕು” ಎಂದು ರಮ್ಯಾ ಬರೆದುಕೊಂಡಿದ್ದಾರೆ.

ಯುವನಟಿ ಚೇತನಾ ರಾಜ್ ಸಾವಿನ ಕುರಿತು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಎಂ.ಎಸ್​. ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ವರದಿಗಾಗಿ ಪೊಲೀಸರು ನಿರೀಕ್ಷಿಸುತ್ತಿದ್ದು, ನಿನ್ನೆ ಅವರ ಅಂತ್ಯಕ್ರಿಯೆ ನೆರವೇರಿದೆ……