Breaking News

“chef ಚಿದಂಬರ” ಆದ ಅನಿರುದ್ದ್..!

ಟೈಟೆಲ್ ರಿಲೀಸ್ ಮಾಡಿದ ಕಿಚ್ಚ ಸುದೀಪ್...

SHARE......LIKE......COMMENT......

ಸಿನಿಮಾ:

ನಟ ಅನಿರುದ್ಧ್ , ನಟಿಸುತ್ತಿರುವ ಹೊಚ್ಚ ಹೊಸ ಚಲನಚಿತ್ರ “chef ಚಿದಂಬರ” ಚಿತ್ರೀಕರಣಕ್ಕೆ ಕ್ಷಣಗಣನೆ ಶುರುವಾಗಿದೆ ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿ, ಚಿತ್ರಕ್ಕೆ ಶುಭ ಕೋರಿದರು.ಅನಿರುದ್ಧ್ ಈ ಚಿತ್ರದಲ್ಲಿ ಶೆಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೇ ತಿಂಗಳ ಹತ್ತರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರದಲ್ಲಿ ಅನಿರುದ್ದ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.
ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು “chef ಚಿದಂಬರ” ಚಿತ್ರದಲ್ಲಿ ನಟಿಸುತ್ತಿದ್ದಾರೆ.