Breaking News

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ..!

ಬಾಂಬ್ ಇಟ್ಟಿರುವುದಾಗಿ ಅಪರಿಚಿತನಿಂದ ಬೆದರಿಕೆ ಕರೆ....

SHARE......LIKE......COMMENT......

ಬೆಂಗಳೂರು:

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪರಿಚಿತ ಇಂದು ಮುಂಜಾನೆ ಹುಸಿ ಬಾಂಬ್ ಕರೆ ಬಂದಿದ್ದು, ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. ಇಂದು ಬೆಳಗಿನ ಜಾವ 3.30 ರ ಸಮಯದಲ್ಲಿ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಏರ್ಪೋರ್ಟ್ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಎಲ್ಲೆಡೆ ಪರಿಶೀಲನೆ ನಡೆಸಿದರು. ಡಾಗ್ ಸ್ಕ್ವಾಡ್, ಸಿಎಸ್ ಎಫ್, ಬಿಎಸ್ ಎಫ್ ತಂಡದವರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು. ಏರ್‌ಲೈನ್ ಗೇಟ್‌ಗಳು ಸೇರಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ.

ಬೆಳ್ಳಂಬೆಳಗ್ಗೆಯೇ ಈ ಹುಸಿ ಬಾಂಬ್ ಕರೆಯಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಪ್ರಯಾಣಿಕರಲ್ಲಿ ಆತಂಕ ದೂರವಾಗಿದೆ. ಇದೀಗ ಹುಸಿ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ……