Breaking News

ರಾಜ್ಯಾದ್ಯಂತ ಮತ್ತೆ 12 ದಿನ ಲಾಕ್‍ಡೌನ್..!?

ಜುಲೈ 6ರಿಂದ ಮತ್ತೆ ಲಾಕ್‍ಡೌನ್ ಜಾರಿಗೆ....

SHARE......LIKE......COMMENT......

ಬೆಂಗಳೂರು:

ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳುಲು ಮುಂದಾಗಿದ್ದು, ಜುಲೈ 6ರಿಂದ ಮತ್ತೆ ಲಾಕ್‍ಡೌನ್ ಜಾರಿಗೆ ಬರಲಿದೆ. ಕೊರೊನಾ ಸೋಂಕು ಪ್ರಕರಣಗಳು ನಿರೀಕ್ಷೆಗೂ ಮೀರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ನಂತರ ಲಾಕ್‍ಡೌನ್‍ನ್ನು ಮತ್ತಷ್ಟು ಬಿಗಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಎರಡೂ ಸಾವಿರಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೇ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸೋಂಕು ಇನ್ನಷ್ಟು ಉಲ್ಬಣಗೊಳ್ಳಲಿದೆ ಎಂದು ತಜ್ಞರು ವರದಿ ನೀಡಿದ್ದು, ಸಿಎಂ ಒಪ್ಪಿದ್ದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ಬಳಿಕ ರಾಜ್ಯದಲ್ಲಿ ಮತ್ತೆ ಜುಲೈ 6ರಿಂದ ಲಾಕ್‍ಡೌನ್ ಜಾರಿಗೆ ಬರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್‍ಡೌನ್ ಜಾರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಇನ್ನು ಮುಂದೆ ಸರ್ಕಾರ ಕೆಲವು ಕಠಿಣ ನಿಬಂಧನೆಗಳನ್ನು ಜಾರಿ ಮಾಡಲು ಮುಂದಾಗಿದೆ. ಮುಖ್ಯವಾಗಿ ರಾಜಧಾನಿ ಬೆಂಗಳೂರಿನಿಂದ ಹೊರ ಹೋಗುವವರು ಹಾಗೂ ಬರುವವರಿಗೆ ನಿಬಂಧನೆಗಳನ್ನು ಜಾರಿ ಮಾಡಲಿದೆ.

ಒಂದು ಮೂಲದ ಪ್ರಕಾರ ಜು.5ರ ನಂತರ ವಾರದ ಎರಡು ದಿನ ಅಗತ್ಯ ಸೇವೆ, ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಣಿಜ್ಯ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ. ರಾಜ್ಯದಲ್ಲಿ ಕಠಿಣ ಲಾಕ್‍ಡೌನ್ ಜಾರಿ ಮಾಡಲು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪ ಒಲವು ತೋರಿದ್ದು, ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಭೂತ ಎದುರಾಗಲಿದೆ……