ನವದೆೆಹಲಿ:
ಸಣ್ಣ ರೈತರ ಖಾತೆಗೆ ನೇರವಾಗಿ 6 ಸಾವಿರ ರೂಪಾಯಿ….ರೈತರಿಗೆ ಕೆಲವು ಮಹತ್ವದ ಯೋಜನೆಗಳನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಆರಂಭಿಸಲಾಗಿದೆ. ಸಣ್ಣ ರೈತರ ಖಾತೆಗೆ ನೇರವಾಗಿ 6 ಸಾವಿರ ರೂಪಾಯಿ ವರ್ಗಾವಣೆ ಮಾಡಲು ಉದ್ದೇಶಿಸಲಾಗಿದೆ. ಇದರಿಂದ 12 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದಕ್ಕಾಗಿ 753 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ರೈತರು ಸಕಾಲದಲ್ಲಿ ಸಾಲ ಪಾವತಿಸಿದರೆ ಶೇಕಡ 2ರಷ್ಟು ಬಡ್ಡಿ ದರ ಕಡಿತ ಮಾಡಲಾಗುವುದು ಎಂದು ತಿಳಿಸಲಾಗಿದೆ….