Breaking News

ಸ್ಯಾಂಡಲ್‌ವುಡ್‌ನಲ್ಲಿ “ಚಾಂಪಿಯನ್”.ಆಟ ಶುರು..!

ರಾಜ್ಯಾದ್ಯಂತ ಈ ವಾರ ಬಿಡುಗಡೆ....

SHARE......LIKE......COMMENT......

ಸ್ಯಾಂಡಲ್‌ವುಡ್:

ಸ್ಯಾಂಡಲ್‌ವುಡ್‌ನಲ್ಲಿ “ಚಾಂಪಿಯನ್”.ಆಟ ಜೋರಾಗಿ ಶುರುವಾಗಿದೆ,ಯೆಸ್ ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ ” ಚಾಂಪಿಯನ್ ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ “ಚಾಂಪಿಯನ್” ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ, ಆದಿ ಲೋಕೇಶ್, ರಂಗಾಯಣ ರಘು, ಅವಿನಾಶ್, ಕಾಕ್ರೋಜ್ ಸುಧಿ, ಶೋಭರಾಜ್, ಅಶೋಕ್ ಶರ್ಮ, ಪ್ರಶಾಂತ್ ಸಿದ್ದಿ, ಗಿರಿ, ಮಂಡ್ಯ ರಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌. ಖ್ಯಾತ ನಟಿ ಸನ್ನಿಲಿಯೋನ್ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸರವಣನ್ ನಟರಾಜನ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ “ಚಾಂಪಿಯನ್” ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.ದುಃಖದ ಸಂಗತಿಯಂದ್ರೆ ಚಾಂಪಿಯನ್” ಚಿತ್ರದವನ್ನ ನಿರ್ದೇಶಕ ಶಾಹುರಾಜ್ ಶಿಂಧೆ ಬಹಳ ಆಸೆ ಇಟ್ಟುಕೊಂಡು ನಿರ್ಮಾಣ ಮಾಡಿದರು ಆದರೆ ಚಿತ್ರ ಬಿಡುಗಡೆಗೂ ಮುಂಚೆಯೇ ಶಾಹುರಾಜ್ ಶಿಂಧೆ ವಿಧಿವಶರಾದರು…..