ಬೆಂಗಳೂರು :
ಸಿಎಂ ಬಸವರಾಜು ಬೊಮ್ಮಾಯಿ ಅವರು ದಾವೋಸ್ನಿಂದ ವಾಪಸ್ ಆಗಿದ್ದು, ದೇವನಹಳ್ಳಿ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ. ಸಿಎಂ ಮಧ್ಯಾಹ್ನ ದಾವೋಸ್ ಭೇಟಿ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಿಎಂ ಬೊಮ್ಮಾಯಿ ಮೇ 22ರಂದು ದಾವೋಸ್ಗೆ ತೆರಳಿದ್ದರು. ಸ್ವಿಟ್ಜರ್ಲ್ಯಾಂಡ್ನ ದಾವೋಸ್ನಲ್ಲಿ ಸಮ್ಮೇಳನ ನಡೆದಿತ್ತು. ಆರ್ಥಿಕ ಶೃಂಗ ಸಮ್ಮಿಟ್ನಲ್ಲಿ ಸಿಎಂ ಭಾಗಿಯಾಗಿದ್ದರು. ಹಲವು ಕಂಪನಿಗಳ ಜತೆ ಮಾತುಕತೆ ನಡೆಸಿದ್ದರು. ಕರ್ನಾಟಕದಲ್ಲಿ ಹೂಡಿಕೆ ಮಾಡುವ ಸಂಬಂಧ ಮಾತುಕತೆ ನಡೆಸಿದ್ದಾರೆ. ಸಿಎಂಗೆ ಡಾ.ಅಶ್ವಥ್ ನಾರಾಯಣ್, ಮುರುಗೇಶ್ ನಿರಾಣಿ ಸಾಥ್ ನೀಡಿದ್ದರು.ಮಧ್ಯಾಹ್ನ ದಾವೋಸ್ ಭೇಟಿ ಬಗ್ಗೆ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ದಾವೋಸ್ ಭೇಟಿ ಫಲಶೃತಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ……