Breaking News

ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೋಂಕು..!

ಟ್ವೀಟ್ ಮೂಲಕ ಮಾಹಿತಿ ನೀಡಿದ ಪ್ರಿಯಾಂಕಾ ಗಾಂಧಿ....

SHARE......LIKE......COMMENT......

ದೆಹಲಿ :

ಕಾಂಗ್ರೆಸ್ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೋಂಕು ತಗುಲಿದೆ. ಶುಕ್ರವಾರ ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. ನಿನ್ನೆ ಅವರ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ದೃಢಪಟ್ಟಿತ್ತು.

ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ನಲ್ಲಿ, ನನ್ನಗೆ ಕೋವಿಡ್ -19 ಟೆಸ್ಟ್ ಪಾಸಿಟಿವ್ ಬಂದಿದೆ. ನಾನು ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ, ನಾನು ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿ ಮಾಡಿಕೊಳ್ಳುವೆ ಎಂದು ಬರೆದುಕೊಂಡಿದ್ದಾರೆ…..