ಮೈಸೂರು:
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಪೂಜೆ ವೇಳೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಎಂದಿನಂತೆ ಆಷಾಢ ಪೂಜೆಗಳು ನೆರವೇರಲಿದೆ. ಆದರೆ ಪ್ರತಿ ಶುಕ್ರವಾರದಂದು ಸಾರ್ವಜನಿಕರ ಪ್ರವೇಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಆಷಾಢ ಶುಕ್ರವಾರ ಪೂಜೆಗೆ ದೇಶಾದ್ಯಂತ ಭಕ್ತರು ಆಗಮಿಸುತ್ತಾರೆ. ಆದರೆ ಈ ಬಾರಿ ಕೊರೊನಾ ತೀವ್ರವಾಗಿ ಹರಡಿರುವುದರಿಂದ ಭಕ್ತರ ಆರೋಗ್ಯ ದೃಷ್ಟಿಯಿಂದ ಶುಕ್ರವಾರ ಭಕ್ತರಿಗೆ ಅವಕಾಶ ನಿಷೇಧಿಸಲಾಗಿದೆ. ಯಾವುದೇ ರೀತಿಯ ಪ್ರಸಾದ ವಿತರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ……