ವಾಷಿಂಗ್ಟನ್:
ಕರೊನಾ ವೈರಸ್ ಸೋಂಕಿನಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಕಿತ್ಸೆಗಾಗಿ ದಾಖಲಾಗಿರುವ ಆಸ್ಪತ್ರೆಯ ಹೊರಭಾಗದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಟ್ರಂಪ್ ದಾಖಲಾಗಿರುವ ವಾಲ್ಟರ್ ರೀಡ್ ಆಸ್ಪತ್ರೆಯ ಹೊರಭಾಗದಲ್ಲಿ ಬ್ಯಾಗ್ ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರೀಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ತೀವ್ರ ನಿಗಾ ಇರಿಸಿದ್ದಾರೆ. ಟ್ರಂಪ್ ಹಾಗೂ ಪತ್ನಿ ಮೆಲನಿಯಾ ಟ್ರಂಪ್ಗೆ ಅಕ್ಟೋಬರ್ 1ರಂದು ಕರೊನಾ ಸೋಂಕು ದೃಢಪಟ್ಟಿತ್ತು. ಟ್ರಂಪ್ ಅವರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರ, ಕೆಮ್ಮು, ಸುಸ್ತು ಕೂಡ ಕಾಣಿಸಿಕೊಂಡಿದೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಕರೊನಾ ಪಾಸಿಟಿವ್ ದೃಢಪಟ್ಟ ಕೂಡಲೇ ಟ್ರಂಪ್ ಅವರಿಗೆ ವೈಟ್‌ಹೌಸ್‌ನಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ಅವರನ್ನು ವಾಲ್ಟರ್ ರೀಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಧ್ಯಕ್ಷೀಯ ಚುನಾವಣೆ ಹತ್ತಿರ ಬಂದಿದ್ದರೂ ಕರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಟ್ರಂಪ್ ತಮ್ಮ ಎಲ್ಲ ಅಧಿಕೃತ ಕಾರ‌್ಯಕ್ರಮಗಳನ್ನು ರದ್ದುಪಡಿಸಿದ್ದಾರೆ……