ಬೆಂಗಳೂರು:
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು. ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ……
✅ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ.
✅ ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ.
✅ ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ.#PUCKarnataka
— B.C Nagesh (@BCNagesh_bjp) May 20, 2022