Breaking News

ಇಮ್ರಾನ್ ಖಾನ್​​ಗೆ 10 ವರ್ಷಗಳ ಜೈಲು ಶಿಕ್ಷೆ ..!

ದೇಶದ ಗೌಪ್ಯತೆ ಸೋರಿಕೆ ಪ್ರಕರಣ.....

SHARE......LIKE......COMMENT......

ಅಂತರಾಷ್ಟ್ರೀಯ:
ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್​​ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರೀಕ್ – ಇ – ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಹಾಗೂ ಉಪಾಧ್ಯಕ್ಷ ಶಾ ಮಹಮೂದ್ ಖುರೇಷಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್ ಖಾನ್ ಪ್ರಧಾನಿ ಆಗಿದ್ದ ವೇಳೆ ಅಮೆರಿಕದ ವಿದೇಶಾಂಗ ಇಲಾಖೆ ಹಾಗೂ ಪಾಕಿಸ್ತಾನದ ರಾಯಭಾರಿ ನಡುವೆ ನಡೆದಿದ್ದ ಮಾತುಕತೆಯ ವಿವರಗಳನ್ನು ಬಹಿರಂಗವಾಗಿ ದೇಶದ ಜನತೆ ಮುಂದೆ ಹೇಳಿದ್ದರು. ಇಮ್ರಾನ್ ಖಾನ್ ದಾಖಲೆಯನ್ನು ಬಹಿರಂಗ ಮಾಡುವ ಮೂಲಕ ಸರ್ಕಾರಿ ರಹಸ್ಯ ದಾಖಲೆ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಇದರ ಆಧಾರದ ಮೇಲೆ ನ್ಯಾಯಾಲಯ ಇಮ್ರಾನ್‌ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.