ಬೆಂಗಳೂರು:
ಮೂಲಗಳ ಪ್ರಕಾರ ಜುಲೈ 1 ರಿಂದ ಶಾಲೆ ಆರಂಭಿಸಲು ಎಲ್ಲಾ ಸಿದ್ಧತೆ ಆರಂಭಿಸಲಾಗಿದೆ. ಜುಲೈ 1 ರಿಂದ ಪಾಳಿ ಆಧಾರದಲ್ಲಿ ಶಾಲೆ ಆರಂಭಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಈಗಾಗಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪೋಷಕರ ಅಭಿಪ್ರಾಯವನ್ನೂ ಸಂಗ್ರಹಿಸಲು ಸೂಚಿಸಿದ್ದಾರೆ. ಜುಲೈ 1 ರಿಂದ 4 ರಿಂದ 7 ನೇ ತರಗತಿವರೆಗಿನ ಮಕ್ಕಳಿಗೆ, ಜುಲೈ 15 ರಿಂದ 8 ರಿಂದ 10 ನೇ ತರಗತಿವರೆಗಿನ ಮಕ್ಕಳಿಗೆ ಶಾಲೆ ಆರಂಭಿಸಲಾಗುತ್ತದೆ. ಅದಲ್ಲದೆ ಜೂನ್ 8 ರಿಂದ ಶಾಲಾ ಪ್ರವೇಶಾತಿ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ……