ಹೈದರಾಬಾದ್:
ಉಡುಪಿ ಮೂಲದ ಐಪಿಎಸ್ ಅಧಿಕಾರಿ ಡಾ. ಮಧುಕರ್ ಶೆಟ್ಟಿ (47)ಅವರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ.: ಎಚ್1ಎನ್1 ಕಾಯಿಲೆಯಿಂದ ವಾರದಿಂದ ಬಳಲುತ್ತಿದ್ದು ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದ ಮಧುಕರ ಶೆಟ್ಟಿಯವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಶಸ್ತ್ರಚಿಕಿತ್ಸೆ ನಡೆದಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಹೈದ್ರಾಬಾದ್‌ನ ಸರ್ದಾರ್ ವಲ್ಲಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕರಾಗಿ ಮಧುಕರ್ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದರು…..