ಬೆಂಗಳೂರು:
ಬಜರಂಗದಳ ಬ್ಯಾನ್ ಮಾಡುವ ಕುರಿತ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ರಾಜ್ಯಾದ್ಯಂತ ಬಜರಂಗಿ ಅಭಿಯಾನ ನಡೆದಿದೆ. ಕಾಂಗ್ರೆಸ್ಗೆ ಠಕ್ಕರ್ ಕೊಡಲು ರಾಜ್ಯಾದ್ಯಂತ ಎಲ್ಲ ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಪಠಣೆ ಅಭಿಯಾನ ನಡೆಸ್ಲಾಯ್ತು. ಬಿಜೆಪಿ ಸೇರಿ ಹಿಂದೂ ಸಂಘಟನೆಗಳಿಂದ ಅಭಿಯಾನಕ್ಕೆ ಸಾಥ್ ನೀಡಿದ್ದು, ಧರ್ಮ ರಕ್ಷಣೆಗೆ ಜೊತೆಯಾಗೋಣ ಎಂದು ಹನುಮಾನ್ ಚಾಲೀಸಾ ಪಠಣ ಮಾಡಿದ್ರು. ನಗರದ ಗಾಳಿ ಆಂಜನೇಯ ದೇಗುಲದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಠಣ ನಡೀತು. ಬೆಂಗಳೂರು ಮಾತ್ರವಲ್ಲದೇ ಹಲವು ದೇಗುಲಗಳಲ್ಲಿ ಹನುಮಾನ್ ಚಾಲೀಸಾ ಪಠಣ ಅಭಿಯಾನ ನಡೆದಿದೆ.