Breaking News

ಜೂ.2ರಂದು ಹಾರ್ದಿಕ್ ಪಟೇಲ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ..!

ಗುಜರಾತ್ ಕಾಂಗ್ರೆಸ್‍ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ....

SHARE......LIKE......COMMENT......

ಗುಜರಾತ್ :

ಗುಜರಾತ್ ಕಾಂಗ್ರೆಸ್‍ನ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಜೂನ್ 2ರಂದು ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಈ ಮೊದಲು ಪಾಟಿದಾರ್ ಸಮುದಾಯದ ಮೀಸಲಾತಿ ಕುರಿತಂತೆ ಹೋರಾಟದ ಮೂಲಕ ಮುಂಚೂಣಿಗೆ ಬಂದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಪಕ್ಷದಲ್ಲಿ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ಅದರಲ್ಲಿ ಕೆಲಸ ಮಾಡಲು ತಮಗೆ ಜವಾಬ್ದಾರಿ ನೀಡಿಲ್ಲ ಎಂದು ಆಕ್ಷೇಪಿಸಿ ಮೇ 19ರಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದರು. ಆ ವೇಳೆ ಮುಂದಿನ ರಾಜಕೀಯ ನಡೆ ಬಗ್ಗೆ ಯಾವುದೇ ಸುಳಿವು ನೀಡದೆ ತಟಸ್ಥವಾಗಿರುವುದಾಗಿ ಹೇಳಿದ್ದರು.

ಕಾಂಗ್ರೆಸ್ ತೊರೆಯುತ್ತಿದ್ದಂತ ಹಿಂದು ಸಮುದಾಯದ ಪರವಾಗಿ ದನಿ ಎತ್ತಿರುವ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದರು. ಅಷ್ಟೆ ಅಲ್ಲದೆ ಕಾಂಗ್ರೆಸ್ ನಾಯಕರ ವಿರುದ್ಧ ಹಗೆತನದ ಮತ್ತು ದ್ವೇಷ ಪೂರಿತ ಹೇಳಿಕೆಗಳನ್ನು ನೀಡುವ ಮೂಲಕ ಮುಜುಗರ ಉಂಟು ಮಾಡುತ್ತಿದ್ದಾರೆ.

ಗುಜರಾತ್‍ನ ಕಾಂಗ್ರೆಸ್ ಅಧ್ಯಕ್ಷರು ಹೇಳಿಕೆಯೊಂದನ್ನು ನೀಡಿ ನಾಯಿ ಮೂತ್ರ ಮಾಡಿದ ಇಟ್ಟಿಗೆಗಳನ್ನು ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣಕ್ಕೆ ಬಳಕೆ ಮಾಡಲಾಗುತ್ತಿದೆ ಎಂದಿದ್ದಾರೆ. ಕೇಂದ್ರದ ಮಾಜಿ ಸಚಿವರು ಇದಕ್ಕೆ ದನಿ ಗೂಡಿಸಿದ್ದಾರೆ. ಈ ಎರಡು ಹೇಳಿಕೆಗಳನ್ನು ತರಾಟೆಗೆ ತೆಗೆದುಕೊಂಡಿರುವ ಹಾರ್ದಿಕ್ ಪಟೇಲ್, ಕಾಂಗ್ರೆಸ್‍ಗೆ ಶ್ರೀರಾಮನ ಮೇಲೇಕೆ ಅಷ್ಟು ದ್ವೇಷ ? ಹಿಂದು ಸಮುದಾಯದ ಮೇಲೆಕೆ ಹಗೆತನ ಎಂದು ಪ್ರಶ್ನಿಸಿದ್ದಾರೆ.

ಶತಮಾನಗಳ ಬಳಿಕ ಶ್ರೀರಾಮನ ದೇವಸ್ಥಾನ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ. ಈಗಲೂ ಕಾಂಗ್ರೆಸಿಗರು ರಾಮನನ್ನು ವಿರೋಧಿಸಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟ್ವಿಟ್‍ನಲ್ಲಿ ಹಾರ್ದಿಕ್ ಪಟೀಲ್ ಕಿಡಿಕಾರಿದ್ದಾರೆ.

ಈ ನಡುವೆ ಹಾರ್ದಿಕ್ ಪಟೇಲ್ ಅವರಿಗೆ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್ ನಾಯಕರು, ತಮ್ಮ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ಬಂಧನಕ್ಕೊಳಗಾಗುವ ಆತಂಕದಲ್ಲಿ ಕಾಂಗ್ರೆಸ್ ತೊರೆದಿರುವ ಹಾರ್ದಿಕ್, ಬಿಜೆಪಿ ಓಲೈಕೆಗಾಗಿ ಆಧಾರ ರಹಿತ ಟೀಕೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ…..