Breaking News

“ಪ್ರಭುತ್ವ” ಟ್ರೇಲರ್ ಗೆ ಭಾರಿ ಮೆಚ್ಚುಗೆ..!

ಚೇತನ್ ಚಂದ್ರ ನಟಿಸಿರುವ "ಪ್ರಭುತ್ವ"

SHARE......LIKE......COMMENT......

ಸ್ಯಾಂಡಲ್‌ವುಡ್ :

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ ಹೆಚ್ಚು ಗೆಲುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಕಥಾಹಂದರ ಹೊಂದಿರುವ “ಪ್ರಭುತ್ವ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೇಲರನ್ನು ರಾಜಕೀಯ ಮುಖಂಡರಾದ ರವೀಂದ್ರ ಅನಾವರಣ ಮಾಡಿದರು.
ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.ಪ್ರತಿಯೊಬ್ಬ ಪ್ರಜೆ ಈ ಚಿತ್ರವನ್ನು ನೋಡಬೇಕು. ಮತದಾನ ಅಮೂಲ್ಯವಾದ್ದದ್ದು. ಹಾಗಾಗಿ ಮತದಾನವನ್ನು ಮಾರಾಟ ಮಾಡಿಕೊಳ್ಳಬಾರದು. ಈ ರೀತಿ ಮತದಾನದ ಮಹತ್ವ ಸಾರುವ ಈ ಸಿನಿಮಾಗೆ ನಾನೇ ಕಥೆ ಬರೆದಿದ್ದೇನೆ. ನನ್ನ ಮಗ ರವಿರಾಜ್ ಎಸ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ .ಸದ್ಯದಲ್ಲೇ ಚಿತ್ರ ಕೂಡ ತೆರೆಗೆ ಬರಲಿದೆ. ಚುನಾವಣೆ ಮುಂಚೆಯೇ ಚಿತ್ರವನ್ನು ಬಿಡುಗಡೆ ‌ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರವಿರಾಜ್ ಎಸ್ ಕುಮಾರ್ ತಿಳಿಸಿದರು.
ಎಮಿಲ್ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಚೇತನ್ ಚಂದ್ರ, ಪಾವನ, ನಾಸರ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ಹರೀಶ್ ರಾಯ್, ವಿಜಯ್ ಚೆಂಡೂರ್, ವೀಣಾ ಸುಂದರ್, ರಾಜೇಶ್ ನಟರಂಗ, ಅನಿತಾ ಭಟ್ ಮುಂತಾದವರಿದ್ದಾರೆ.