Breaking News

ಮಹಾರಾಷ್ಟ್ರಕ್ಕೆ ಅಪ್ಪಳಿಸಲಿದೆ ನಿಸರ್ಗ ಚಂಡಮಾರುತ..!

ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ....

SHARE......LIKE......COMMENT......

ಮುಂಬೈ:

ಪಶ್ಚಿಮ ಬಂಗಾಳದಲ್ಲಿ ಅಂಫಾನ್​ ಚಂಡಮಾರುತ ಭಾರೀ ಅನಾಹುತ ಸೃಷ್ಟಿಸಿತ್ತು. ಈ ಚಂಡಮಾರುತ ತಣ್ಣಗಾದ ಬೆನ್ನಲ್ಲೇ ಈಗ ಮಹಾರಾಷ್ಟ್ರಕ್ಕೆ ನಿಸರ್ಗ ಚಂಡಮಾರುತ ಬಂದಪ್ಪಳಿಸಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬುಧವಾರ ಮಹಾರಾಷ್ಟ್ರ ಕರಾವಳಿ ಭಾಗಕ್ಕೆ ನಿಸರ್ಗ ಚಂಡಮಾರುತ ಬಂದಪ್ಪಳಿಸುವ ಸಾಧ್ಯತೆ ಇದೆ. ಗಂಟೆಗೆ 100 ಕಿ.ಮೀ ವೇಗದಲ್ಲಿ ಬೀಸುವ ಈ ಮಾರುತ ಮುಂಬೈ ಹಾಗೂ ಸುತ್ತಮುತ್ತ ಭಾಗದಲ್ಲಿ ಭಾರೀ ಹಾನಿ ಸೃಷ್ಟಿಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗೃತೆ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನಿಸರ್ಗ ಚಂಡಮಾರುತ ಎದುರಿಸಲು ತೆಗೆದುಕೊಂಡ ಕ್ರಮದ ಬಗ್ಗೆ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಜೊತೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಅಗತ್ಯ ಸಹಾಯ ನೀಡುವ ಭರವಸೆ ನೀಡಿದ್ದಾರೆ. ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ . ಕರಾವಳಿ ಅಂಚಿನಲ್ಲಿರುವ ಕೆಲವರನ್ನು ಸ್ಥಳಾಂತರ ಮಾಡುವ ಬಗ್ಗೆಯೂ ಎನ್​ಡಿಆರ್​ಎಫ್​ ಚಿಂತನೆ ನಡೆಸಿದೆ……