ನವದೆಹಲಿ:
ಲಾಕ್‌ಡೌನ್ ಮುಕ್ತಾಯಗೊಳ್ಳಲು ಕೇವಲ ಒಂದು ದಿನ ಬಾಕಿ ಇರುವಾಗಲೇ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಲು ಆರಂಭಿಸಿದೆ. ಗುರುವಾರ ದಾಖಲೆಯ 7135 ಮಂದಿಗೆ ಸೋಂಕು ಕಾಣಿಸಿಕೊಂಡಿತ್ತು. ಶುಕ್ರವಾರ ಈ ದಾಖಲೆ ಕೂಡ ಭಗ್ನಗೊಂಡಿದ್ದು 7720 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೇ ವೇಳೆ 151 ಮಂದಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ.ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 1,68,386ಕ್ಕೆ ಏರಿಕೆಯಾಗಿದ್ದರೆ, ಸಾವಿಗೀಡಾದವರ ಸಂಖ್ಯೆ 4784ಕ್ಕೇರಿಕೆಯಾಗಿದೆ. ಈ ನಡುವೆ, ದೇಶದಲ್ಲಿ ಕೊರೋನಾದಿಂದ 81,702 ಮಂದಿ ಚೇತರಿಸಿಕೊಂಡಿದ್ದಾರೆ……