ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದೆ. ಸಿಎಂ ದೆಹಲಿಗೆ ಹೋಗ್ತಾರೆಂಬ ಸುದ್ದಿ ತಿಳಿಯುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮತ್ತೆ ಆಸೆ ಚಿಗುರೊಡೆದಂತಿದೆ. ಸೋಮವಾರ ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣ ಬೆಳೆಸಲಿದ್ದು, ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆಯಿದೆ. ವರಿಷ್ಠರ ಜೊತೆ ಸಂಪುಟ ರಚನೆ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ. ಹೀಗಾಗಿ, ಸಿಎಂ ದೆಹಲಿ ಟೂರ್ ಇದೀಗ ಭಾರೀ ಕುತೂಹಲ ಮೂಡಿಸಿದೆ.
ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಚರ್ಚೆ ಜೋರು…!
ಸೋಮವಾರ ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣ....
Article Updated: February 3, 2022
Comments Off on ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಚರ್ಚೆ ಜೋರು…!
