Breaking News

17 ಮೇ ವರೆಗೂ ಲಾಕ್ ಡೌನ್ ಕಂಟಿನ್ಯೂ….

ಲಾಕ್ ಡೌನ್ 2 ವಾರ ಮುಂದೂಡಿ ಕೇಂದ್ರ ಸರ್ಕಾರ ಆದೇಶ..!

SHARE......LIKE......COMMENT......

ನವದೆಹಲಿ:

ಕೋವಿಡ್ ವೈರಸ್ ಸಂಬಂಧಿತ ದೇಶವ್ಯಾಪಿ ಲಾಕ್ ಡೌನ್ ಅನ್ನು ಮೇ 4ರಿಂದ ಮತ್ತೆ ಎರಡು ವಾರಗಳ ಕಾಲ ವಿಸ್ತರಿಸಿ ಕೇಂದ್ರ ಸರಕಾರ ಇಂದು ಆದೇಶ ಹೊರಡಿಸಿದೆ.

ದೇಶಾದ್ಯಂತ ಇನ್ನು ಎರಡು ವಾರ ವಿಮಾನ ಸಂಚಾರ, ರೈಲು ಸಂಚಾರ , ಮೆಟ್ರೋ ಸೇವೆಗಳು ಹಾಗೂ ಅಂತರ್ ರಾಜ್ಯ ರಸ್ತೆ ಸಂಚಾರಕ್ಕೆ ನಿರ್ಬಂಧ ಇರಲಿದೆ. ಇನ್ನು ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳು, ಇನ್ನಿತರ ಶಿಕ್ಷಣ/ತರಬೇತಿ ಹಾಗೂ ಕೋಚಿಂಗ್ ಸಂಸ್ಥೆಗಳು ಕಾರ್ಯನಿರ್ವಹಿಸುವಂತಿಲ್ಲ. ಇನ್ನು ಹೊಟೇಲ್ ಗಳು, ರೆಸ್ಟೋರೆಂಟ್ ಗಳು, ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರ್ಬಂಧ ಇರಲಿದೆ.

ಇನ್ನು, ಸಾರ್ವಜನಿಕ ಸಮಾರಂಭಗಳು, ಶಾಪಿಂಗ್ ಮಾಲ್ ಗಳು, ಚಿತ್ರಮಂದಿರಗಳು, ಸ್ಪೋರ್ಟ್ ಕಾಂಪ್ಲೆಕ್ಸ್ ಗಳು ಹಾಗೂ ಜಿಮ್ ಗಳಲ್ಲಿ ಜನ ಸೇರುವಿಕೆಯನ್ನು ಕಡ್ಡಾಯವಾಗಿ ಇನ್ನು ಎರಡು ವಾರ ನಿರ್ಬಂಧಿಸಲಾಗಿದೆ. ಮಾತ್ರವಲ್ಲದೇ ದೇಶಾದ್ಯಂತ ರಾಜಕೀಯ, ಸಾರ್ವಜನಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಜನ ಸೇರುವಂತಿಲ್ಲ….