ಬೆಂಗಳೂರು:
#MeToo ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಅವರ ವಿರುದ್ಧ ನಟ ಅರ್ಜುನ್ ಸರ್ಜಾ ಅವರು ಗುರುವಾರ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್‌ನಲ್ಲಿ ಧ್ರುವ ಸರ್ಜಾ ಮೂಲಕ ಮಾನನಷ್ಟ ಮೊಕದ್ದಮೆ ದಾಖಲು ಮಾಡಿಸಿದ್ದು, 5 ಕೋಟಿ ರೂಪಾಯಿ ನಷ್ಟ ಪರಿಹಾರ ನೀಡಲು ಮನವಿ ಸಲ್ಲಿಸಿದ್ದಾರೆ.
ಅರ್ಜಿ ತುರ್ತು ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಶ್ರುತಿ ಹೇಳಿಕೆಗಳಿಗೆ ತಡೆ ನೀಡಬೇಕು ಎಂದು ಸರ್ಜಾ ಮನವಿ ಸಲ್ಲಿಸದ್ದರು.
ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ ಅವರು ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು,ಶ್ರುತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸರ್ಜಾ ಅವರ ಟ್ವೀಟರ್ ಮತ್ತು ಈ ಮೇಲ್ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ……