ಜಪಾನ್:
ಪ್ರಧಾನಿ ನರೇಂದ್ರ ಮೋದಿ ಜಪಾನ್ಗೆ ಭೇಟಿ ನೀಡಿದ್ದಾರೆ. ಕ್ವಾಡ್ ರಾಷ್ಟ್ರಗಳ ಜತೆಗಿನ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಪನೀಸ್, ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಸೇರಿದಂತೆ ಹಲವು ನಾಯಕರು ಈ ಸಮಾವೇಶದಲ್ಲಿ ಭಾಗಿಯಾಗ್ತಿದ್ದಾರೆ. ಜಪಾನ್ನ 35ಕ್ಕೂ ಹೆಚ್ಚು ಕಂಪನಿಗಳ ಸಿಇಓಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಭಾರತದಲ್ಲಿ ಹೂಡಿಕೆಗೆ ಜಪಾನ್ ಕಂಪನಿಗಳಿಗೆ ಪ್ರಧಾನಿ ಆಹ್ವಾನ ನೀಡಲಿದ್ದಾರೆ. ಇನ್ನು ಟೋಕಿಯೋಗೆ ಬಂದಿಳಿದ ಪ್ರಧಾನಿ ಮೋದಿ ಅವ್ರಿಗೆ ಅನಿವಾಸಿ ಭಾರತೀಯರು ಆತ್ಮೀಯ ಸ್ವಾಗತ ಕೋರಿದ್ರು.