Breaking News

ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ..!

ಕೊವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ....

SHARE......LIKE......COMMENT......

ಬೆಂಗಳೂರು:

ರಾಜ್ಯ ಸರ್ಕಾರ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಮಾರ್ಗಸೂಚಿಯನ್ನು ಪ್ರಕಟಮಾಡಿ ಆದೇಶ ಹೊರಡಿಸಿದ್ದು ಅದರ ವಿವರ ಈ ಕೆಳಗಿನಂತಿದೆ

1. ಕ್ರೈಸ್ತ ಧರ್ಮದ ಚರ್ಚ್‌ ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು/ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.

2. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೊವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಿದೆ.

3. ದಿನಾಂಕ 30.12.2020 ರಿಂದ 02.01.2021ರವರಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ/ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮಗಳನ್ನು ವಿಶೇಷ ಪಾರ್ಟಿ, ಇತ್ಯಾದಿ ನಿಷೇಧಿಸಿದೆ.ಆದರೆ, ಕ್ಲಬ್/ ಪಬ್/ ರೆಸ್ಟೋರೆಂಟ್‌ಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ.

4. ಹೊಸ ವರ್ಷಾಚರಣೆ ಸಂಬಂಧದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ.

5. ಆಯ್ದ ರಸ್ತೆ ಸ್ಥಳಗಳಿಗೆ ಸಂಬಂಧಿಸಿದಂತೆ, ಸ್ಮಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು. ಸರ್ಕಾರದ ಆದೇಶ ಸಂಖ್ಯೆ ಕಂ.ಇ 158 ಟಿ ಎನ್ ಆರ್ 2020 ದಿನಾಂಕ 27-11-2020 ರಲ್ಲಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಅದರಂತೆ ಬಹು ಮುಖ್ಯವಾಗಿ 65ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರತಕ್ಕದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ ಧರಿಸುವುದು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್‌ಗಳು/ಮಾಲ್‌ಗಳು/ ವೆಬ್/ ರೆಸ್ಟೋರೆಂಟ್‌ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಲ್ ಸ್ಮಿನಿಂಗ್ ಹಾಗೂ ಸ್ಮಾನಿಟೈಸರ್‌ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸತಕ್ಕದ್ದು.

6. ಹೋಟೆಲ್‌ಗಳು/ಮಾಲ್‌ಗಳು/ಪಬ್/ರೆಸ್ಟೋರೆಂಟ್‌ಗಳು ಹಾಗೂ ಅಂತಹ ಸ್ಥಳ/ಪ್ರದೇಶಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೊವಿಡ್-19ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರಲು ಜಾಗ್ರತೆ ವಹಿಸುವುದು ಅಗತ್ಯವಿದ್ದಲ್ಲಿ, ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‌ಲೈನ್ ಮುಖಾಂತರ/ಟೊಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು (Pre Booking) ವ್ಯವಸ್ಥೆಯನ್ನು ಕಲ್ಪಿಸುವುದು.

7. ಪ್ರಾಂಗಣಗಳಲ್ಲಿ, ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸತಕ್ಕದ್ದು.

8. ಸರ್ಕಾರದ ಮಾರ್ಗಸೂಚಿಯಂತೆ ಕಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚತಕ್ಕದ್ದು.

9. ಕೊವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇಲಾಖೆ/ಕಾರ್ಪೋರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

10. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ | ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು……