ಹ್ಯಾಮಿಲ್ಟನ್:
ವೆಸ್ಟ್‌ಇಂಡೀಸ್ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ನ್ಯೂಜಿಲೆಂಡ್ ಇನ್ನಿಂಗ್ಸ್ ಹಾಗೂ 134 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ ನ್ಯೂಜಿಲೆಂಡ್, ತವರಿನಲ್ಲಿ ವಿಂಡೀಸ್ ಹಾಗೂ ಪಾಕಿಸ್ತಾನ ವಿರುದ್ಧ ನಡೆಯಲಿರುವ ಒಟ್ಟು 4 ಪಂದ್ಯಗಳನ್ನು ಜಯಿಸಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ಗುರಿ ಹೊಂದಿದೆ. ಫಾಲೋ ಆನ್ ಹೇರಿಸಿಕೊಂಡು 2ನೇ ಇನ್ನಿಂಗ್ಸ್ 3ನೇ ದಿನದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿದ್ದ ವಿಂಡೀಸ್, 4ನೇ ದಿನವಾದ ಭಾನುವಾರ 247 ರನ್‌ಗಳಿಗೆ ಆಲೌಟ್ ಆಯಿತು……