Breaking News

ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿ ಕ್ರಿಸ್‌ಮಸ್, ಹೊಸ ವರ್ಷಾಚರಣೆಗೆ ಕಂಪ್ಲೀಟ್ ಬ್ರೇಕ್..!

9 ದಿನಗಳವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ....

SHARE......LIKE......COMMENT......

ಬೆಂಗಳೂರು:

ಹೊಸ ಮಾದರಿಯ ಕೊರೋನಾ ವೈರಸ್‌ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಹೇರಲಾಗಿದೆ. ಇಂದಿನಿಂದ ಆರಂಭವಾಗಿ ಮುಂದಿನ ಒಂಭತ್ತು ದಿನಗಳವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಈ ವಿಚಾರವಾಗಿ ಮಾಹಿತಿ ನೀಡಿದ ಸಿಎಂ ಬಿ. ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಇಂದಿನಿಂದ ಜಾರಿಯಾಗಿ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ವಿಶೇಷ ಆಚರಣೆಗೂ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವರು, ತುರ್ತು ಸೇವೆಗಳಿಗಷ್ಟೇ ಮಾತ್ರ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ. ಈ ಮೂಲಕ ಹೊಸ ವೈರಸ್ ತಡೆಗೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ನೈಟ್‌ ಕರ್ಫ್ಯೂ ವೇಳೆ ಕೇವಲ ಹಾಲು, ತರಕಾರಿ, ಔಷಧ ವಿತರಣೆ ವಾಹನಗಳ ಸಂಚಾರಕ್ಕಷ್ಟೇ ಅವಕಾಶವಿರಲಿದ್ದು, ಅಗತ್ಯ ವಸ್ತುಗಳ ಸರಬರಾಜು ವಾಹನಗಳಿಗೆ ಯಾವುದೇ ನಿರ್ಬಂಧವಿರಲಾರದು. ಅಲ್ಲದೇ ಆಸ್ಪತ್ರೆ, ಆಂಬುಲೆನ್ಸ್, ಮೆಡಿಕಲ್ ಸ್ಟೋರ್‌ಗಳಿಗೆ ಈ ಬಂದ್‌ನಿಂದ ವಿನಾಯ್ತಿ ನೀಡಲಾಗಿದೆ. ಈ ಮೇಲಿನ ವ್ಯವಸ್ಥೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯವಸ್ಥೆಗಳು ಬಂದ್ ಆಗಲಿವೆ. ಹೋಟೆಲ್, ಬಾರ್ ಎಂಡ್ ರೆಸ್ಟೋರೆಂಟ್ ಎಲ್ಲವೂ ಮುಚ್ಚಲಿವೆ……