Breaking News

ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​..!

‘ಆದಿಪುರುಷ್​’ ಟೀಸರ್​ ಬಿಡುಗಡೆ....

SHARE......LIKE......COMMENT......

ಬೆಂಗಳೂರು:

ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಟೀಸರ್​ ಬಿಡುಗಡೆ ಆಗಿದೆ. ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ನಟಿಸಿರುವ ‘ಆದಿಪುರುಷ್​’ (Adipurush) ಚಿತ್ರ ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ. ಈಗ ಈ ಸಿನಿಮಾದ ಟೀಸರ್​ ರಿಲೀಸ್​ ಆಗಿದೆ. ಆಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮ ಮಾಡಿ ಟೀಸರ್​ (Adipurush Teaser) ಬಿಡುಗಡೆ ಮಾಡಲಾಗಿದೆ.

ರಾಮನ ಅವತಾರದಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಸೀತೆಯಾಗಿ ಕೃತಿ ಸನೋನ್​ ಅಭಿನಯಿಸಿದ್ದಾರೆ. ಹತ್ತು ತಲೆಯ ರಾವಣನಾಗಿ ಸೈಫ್​ ಅಲಿ ಖಾನ್​ ಅಬ್ಬರಿಸಿದ್ದಾರೆ. ‘ಆದಿಪುರುಷ್​’ ಟೀಸರ್​​ನಲ್ಲಿನ ಗ್ರಾಫಿಕ್ಸ್​ ಕಂಡು ಫ್ಯಾನ್ಸ್​ ವಾವ್​ ಎನ್ನುತ್ತಿದ್ದಾರೆ. ಹೈಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ. ಚಿತ್ರದ ಪ್ರತಿ ಫ್ರೇಮ್​ ಕೂಡ ಅದ್ದೂರಿಯಾಗಿದೆ ಎಂಬುದಕ್ಕೆ ಈ ಟೀಸರ್​ ಸಾಕ್ಷಿ ಒದಗಿಸುತ್ತಿದೆ.

ಭೂಷಣ್​ ಕುಮಾರ್ ಮತ್ತು ಕ್ರಿಷನ್​ ಕುಮಾರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. 2023ರ ಜನವರಿ 12ರಂದು 3ಡಿ ವರ್ಷನ್​ನಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಅಯೋಧ್ಯೆಯ ಸರಯು ನದಿಯ ದಂಡೆ ಮೇಲೆ ಇಂದು (ಅ.2) ಟೀಸರ್​ ಬಿಡುಗಡೆ ಆಗಿರುವುದು ವಿಶೇಷ. ಬೃಹತ್​ ವೇದಿಕೆಯಲ್ಲಿ, ದೊಡ್ಡ ಎಲ್​ಇಡಿ ಪರದೆ ಮೇಲೆ ಟೀಸರ್​ ಬಿತ್ತರ ಮಾಡಲಾಗಿದೆ. ಇದನ್ನು ಕಂಡು ಫ್ಯಾನ್ಸ್​ ಕಣ್ತುಂಬಿಕೊಂಡಿದ್ದಾರೆ.

ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ‘ಆದಿಪುರುಷ್​’ ಟೀಸರ್​ ರಿಲೀಸ್​ ಆಗಿದೆ. ಎಲ್ಲ ಭಾಷೆಗಳಿಂದಲೂ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ನಿರ್ದೇಶಕ ಓಂ ರಾವುತ್​ ಅವರ ಕಾರ್ಯಕ್ಕೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

‘ಬಾಹುಬಲಿ’ ಚಿತ್ರದ ಯಶಸ್ಸಿನ ನಂತರ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಹೀರೋ ಇಮೇಜ್​ ಪಡೆದುಕೊಂಡರು. ಹಾಗಾಗಿ ಅವರ ಎಲ್ಲ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಕ್ಕಿಲ್ಲ. ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋತವು. ಈಗ ‘ಆದಿಪುರುಷ್​’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ……