Breaking News

ಕೊರೋನಾ ಕಾರಣದಿಂದ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲು..!

ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲು....

SHARE......LIKE......COMMENT......

ಬೆಂಗಳೂರು:

ಕೊರೋನಾ ಕಾರಣದಿಂದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದಂತ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಸಚಿವರು ಹೋಂ ಕ್ವಾರಂಟೈನ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.ಆದ್ರೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ವೈದ್ಯ ಸಲಹೆಯ ಮೇರೆಗೆ ಇದೀಗ ಆಸ್ಪತ್ರೆಗೆ ಕೊರೋನಾ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು……