ಬೆಂಗಳೂರು:
ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮಾಡಲಿದ್ದಾರೆ, ದೇಶದ ರಾಜ್ಯಗಳಲ್ಲಿ ಕರೋನಾ ಸೋಂಕು ಹಾಗೂ ನಿಯಂತ್ರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ,ದೇಶದಲ್ಲಿ ಲಾಕ್ಡೌನ್ ಮುಂದುವರಿಸಬೇಕಾ ಅಥವಾ ಲಾಕ್ಡೌನ್ ಸಡಿಲಿಕೆ ಮಾಡುವುದಾ ಎನ್ನುವ ಬಗ್ಗೆ ಫೈನಲ್ ಆಗಲಿದೆ,ನಾಳೆ ಬೆಳಗ್ಗೆ 10 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಧಾನಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಲ್ಲಿದ್ದಾರೆ ,ವಿಡಿಯೋ ಕಾನ್ಫರೆನ್ಸ್ ಗೂ ಮುನ್ನ ಸಂಬಂಧಿಸಿದ ಸಚಿವರು, ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ…..