Breaking News

ಇಂದು ನೂತನ ಸಂಸತ್​ ಭವನ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು..!

ಈ ಕಟ್ಟಡ ನಿರ್ಮಾಣಕ್ಕೆ 971 ಕೋಟಿ ರೂಪಾಯಿ ವೆಚ್ಚ....

SHARE......LIKE......COMMENT......

ನವದೆಹಲಿ:

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್‌ ಭವನದ ಕಟ್ಟಡಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಸಂಸತ್‌ ಭವನದ ಮುಂದಿರುವ ಆವರಣದಲ್ಲಿರುವ ನಿಯೋಜಿತ ಸ್ಥಳದಲ್ಲಿ ಮಧ್ಯಾಹ್ನ 12.50ಕ್ಕೆ ಭೂಮಿ ಪೂಜೆ ನೆರವೇರಿಸಿ, ಬಳಿಕ ಅಡಿಗಲ್ಲು ಹಾಕಲಿದ್ದಾರೆ. ಭೂಮಿ ಪೂಜೆ ಮುಗಿಸಿದ ಬಳಿಕ ಸಮಯ 2.15ಕ್ಕೆ ಸಾರ್ವಜನಿಕರನ್ನುದ್ದೇಶಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ಮಾಹಿತಿ ನೀಡಿವೆ. ಇನ್ನು 64,500 ಚದರ ಮೀಟರ್‌ ವಿಸ್ತೀರ್ಣದ ಈ ಕಟ್ಟಡ ನಿರ್ಮಾಣಕ್ಕೆ ಸುಮಾರು 971 ಕೋಟಿ ರೂಪಾಯಿ ವೆಚ್ಚ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಭೂಕಂಪನ ನಿರೋಧಕ ವ್ಯವಸ್ಥೆಯಡಿ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಈ ಕಟ್ಟಡ ನಿರ್ಮಾಣ ಕಾರ್ಯದಲ್ಲಿ 2,000 ಮಂದಿ ನೇರವಾಗಿ ಹಾಗೂ 9,000 ಮಂದಿ ಪರೋಕ್ಷವಾಗಿ ಪಾಲ್ಗೊಳ್ಳಲಿದ್ದಾರೆ. 100 ವರ್ಷದ ಹಳೆಯ ಕಟ್ಟಡಕ್ಕೆ ಯಾವುದೇ ಹಾನಿಯಾಗದಂತೆಯೂ ನೋಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಸದ್ಯ ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸುವ ಹಿನ್ನೆಲೆ ನೂತನ ಕಟ್ಟಡದಲ್ಲಿ ಭವ್ಯವಾದ ಸಂವಿಧಾನ ಸಭಾಂಗಣ ನಿರ್ಮಿಸಲಾಗುತ್ತದೆ. ಲೋಕಸಭಾ ಹಾಗೂ ರಾಜ್ಯಸಭಾ ಸದನಗಳಲ್ಲಿ ಕ್ರಮವಾಗಿ 888 ಮತ್ತು 384 ಆಸನ ಸಾಮರ್ಥ್ಯ ಹೊಂದಿರಲಿವೆ. ಬರುವ ದಿನಗಳಲ್ಲಿ ಉಭಯ ಸದನಗಳ ಸದಸ್ಯರ ಸಂಖ್ಯೆಯಲ್ಲಿ ಏರಿಕೆ ಆಗಬಹುದೆಂಬುದನ್ನು ಸಹ ಗಮನದಲ್ಲಿಟ್ಟುಕೊಂಡು ಆಸನಗಳ ಸಾಮರ್ಥ್ಯ ಹೆಚ್ಚಿಸಲಾಗಿದೆ……