Breaking News

ಮಾಸ್ಕ್‌ ಧರಿಸದವರಿಗೆ 1000 ರೂ. ದಂಡ..!

ಸಚಿವ ಡಾ.ಕೆ. ಸುಧಾಕರ್ ಮಾಹಿತಿ....

SHARE......LIKE......COMMENT......

ಬೆಂಗಳೂರು:

ಇನ್ನುಮುಂದೆ ಮಾಸ್ಕ್‌ ಧರಿಸದವರಿಗೆ ದಂಡ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಮಾಸ್ಕ್ ಹಾಕದವರಿಗೆ ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳ ಶಿಫಾರಸಿನ‌ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ. ಪೂರ್ತಿಯಾಗಿ ಮಾಸ್ಕ್ ಧರಿಸದರಿಗೂ ಸಹ ದಂಡ ಅನ್ವಯವಾಗಲಿದೆ.

ಇತ್ತೀಚಿನ‌ ದಿನಗಳಲ್ಲಿ ಮಾಸ್ಕ್‌ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರೂ. ದಂಡವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆಯಾ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಹೇಳಿದರು. ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ‌ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲೀಕರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ……