Breaking News

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ..!

ಕಾಂಗ್ರೆಸ್​ಗೆ ಗುಡ್ ಬೈ ಹೇಳಿದ ಬ್ರಿಜೇಶ್ ಕಾಳಪ್ಪ‌,,,.

SHARE......LIKE......COMMENT......

ಬೆಂಗಳೂರು:

ಕಾಂಗ್ರೆಸ್ ಹಿರಿಯ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ವಿಧಾನ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟವಾಗಿದೆ. ಎರಡು ದಿನಗಳ ಹಿಂದೆಯಷ್ಟೇ ರಾಜ್ಯಸಭಾ ಟಿಕೆಟ್ ವಂಚಿತ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಇದೀಗ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬ್ರಿಜೇಶ್ ಕಾಳಪ್ಪ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನ ಸೋನಿಯಾ ಗಾಂಧಿಯವರಿಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುವ ಕುರಿತು ಬ್ರಿಜೇಶ್ ಕಾಳಪ್ಪ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿನ ಮಾಹಿತಿಯನ್ನು ಬ್ರಿಜೇಶ್ ಕಾಳಪ್ಪ ಹಂಚಿಕೊಂಡಿದ್ದಾರೆ…..