ಬೆಂಗಳೂರು:
ಕೊರೊನಾ ಸೋಂಕು ನಿವಾರಣೆ ಉದ್ದೇಶದಿಂದ ನಗರದಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್‍ಡೌನ್ ಮತ್ತೆ ಮುಂದುವರೆಯುವ ಸಾಧ್ಯತೆಗಳಿವೆ. ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಒಂದು ವಾರದ ಲಾಕ್‍ಡೌನ್‍ನಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹೀಗಾಗಿ ಲಾಕ್‍ಡೌನ್ ಮುಂದುವರಿಕೆಗೆ ಸಕಲ ಸಿದ್ದತೆಗಳನ್ನು ಬಿಬಿಎಂಪಿ ಮಾಡಿಕೊಂಡಿದೆ. ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಲಾಕ್‍ಡೌನ್ ಮುಂದುವರಿಸಬೇಕಾದ ಅನಿವಾರ್ಯತೆ ಇದೆ ಎನ್ನುವುದು ಗೊತ್ತಾಗಿದೆ. ಹೀಗಾಗಿ ಸರ್ಕಾರದ ಮಟ್ಟದಲ್ಲೂ ಲಾಕ್‍ಡೌನ್ ಮುಂದುವರೆಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ 7 ಸಾವಿರಕ್ಕೂ ಹೆಚ್ಚು ಕಂಟೈನ್‍ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಸೂಚನೆಯಂತೆ ಕಂಟೈನ್‍ಮೆಂಟ್ ಜೋನ್‍ಗಳ ಪ್ರತಿ ಮನೆ ಮನೆಯಲ್ಲೂ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ……