ಬೆಂಗಳೂರು:
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಯಶಸ್ವಿಯಾಗಿ ನಡೆಯುತ್ತಿದ್ದು, ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಸವಾಲೆಸೆಯಲಿದೆ. ಸಂಜೆ 7.30ಕ್ಕೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್‌ನಲ್ಲಿ ಪಂದ್ಯ ನಡೆಯಲಿದೆ. ಉಭಯ ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಪ್ಲೇ ಆಫ್ ಪ್ರವೇಶಿಸಿಲು ಕಾದಾಡುತ್ತಿದೆ.
ಇನ್ನು ಕೇನ್ ವಿಲಿಯಂಸನ್ ನಾಯಕತ್ವದಲ್ಲಿ ಮುನ್ನಡೆಯುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡವು ಟೂರ್ನಿಯಲ್ಲಿ ಸಮಾಧಾನಕರ ಪ್ರದರ್ಶನ ನೀಡುತ್ತಿದೆ. ಇಲ್ಲಿಯವರೆಗೆ ಆಡಿರುವ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿದ್ದು, ಆರರಲ್ಲಿ ಸೋಲು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಇನ್ನೊಂದೆಡೆ ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಸಿದಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಟೂರ್ನಿಯಲ್ಲಿ ನಿರಾಸಾದಾಯಕ ಪ್ರದರ್ಶನ ನೀಡುತ್ತಿದೆ. ಇಲ್ಲಿವರೆಗೆ ಆಡಿರುವ ಹನ್ನೆರಡು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಿದ್ದು, ಇನ್ನುಳಿದ ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಉಭಯ ತಂಡಗಳು ಸದ್ಯ ಪ್ಲೇ ಆಫ್ ಪ್ರವೇಶಿಸಲು ಹೆಣಗಾಡುತ್ತಿದ್ದು, ಇಂದು ನಡೆಯಲಿರುವ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.
ಸಂಭಾವ್ಯ ಆಟಗಾರರ ಪಟ್ಟಿ:
ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ಕ್ಯಾ), ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ಸ್ಯಾಮ್ ಬಿಲ್ಲಿಂಗ್ಸ್ (ವಿ.ಕೀ), ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ, ವರುಣ್ ಚಕ್ರವರ್ತಿ
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ಕ್ಯಾ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿ.ಕೀ), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಕಾರ್ತಿಕ್ ತ್ಯಾಗಿ……