Breaking News

ಎದೆ ನೋವು ಹಿನ್ನಲೆ ಆಸ್ಪತ್ರೆಗೆ ದಾಖಲಾದ ನಾದ ಬ್ರಹ್ಮ ಹಂಸಲೇಖ..!

ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ....

SHARE......LIKE......COMMENT......

ಬೆಂಗಳೂರು :

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಹಂಸಲೇಖ ಅವರು ರಾಜಾಜಿನಗರದ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರೆ ಏನೂ ತೊಂದರೆ ಇಲ್ಲ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್‌ನಲ್ಲೆ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ……