ಬೆಂಗಳೂರು:
ಬೆಂಗಳೂರಿನಲ್ಲಿ ಪ್ರಸಿದ್ಧ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಪರಿಷೆಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗ್ತಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆಗೆ ಸ್ಥಳೀಯ ಶಾಸಕರಾದ ರವಿ ಸುಬ್ರಹ್ಮಣ್ಯ ಚಾಲನೆ ನೀಡಿದ್ರು. ಚಿಕ್ಕಪೇಟೆ MLA ಉದಯ್ ಗರುಡಾಚಾರ್, ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಮತ್ತಿತರರು ಹಾಜರಿದ್ದರು. ದೊಡ್ಡಗಣಪತಿಯ ದರ್ಶನ ಪಡೆಯಲು ಅಪಾರ ಪ್ರಮಾಣದಲ್ಲಿ ಜನರು ಬರ್ತಿದ್ದಾರೆ…..