Breaking News

ನಾಳೆ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ..!

ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆ....

SHARE......LIKE......COMMENT......

ಬೆಂಗಳೂರು:

ಅಭಿಮಾನಿಗಳಿಂದ ಪ್ರೀತಿಯಿಂದ ‘ಅಪ್ಪು’ ಎಂದು ಕರೆಸಿಕೊಳ್ಳುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೇವಲ 46 ವರ್ಷದ ಸ್ಟಾರ್ ನಟನ ನಿಧನದ ಸುದ್ದಿ ಇಡೀ ಕರುನಾಡಿನ ಜನತೆಗೆ ಆಘಾತವನ್ನುಂಟು ಮಾಡಿದೆ. ಪುನೀತ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ಸಕಲ ಸರ್ಕಾರಿ​ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರದ ಮೆರವಣಿಗೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ(Kanteerava Studio)ದಲ್ಲಿ ನಾಳೆ ಮಧ್ಯಾಹ್ನ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ ಎಂದು ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ತಿಳಿಸಿದ್ದಾರೆ.  ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿಯೇ ‘ಅಪ್ಪು’ವಿನ ಅಂತ್ಯಸಂಸ್ಕಾರ ನೆರವೇರಿಸಲಾಗುವುದು…