Breaking News

ಧೂಮಪಾನ ಮಾಡುವವರಿಗೆ ಮತ್ತೊಮ್ಮೆ ಭಾರೀ ಆಘಾತ..!?

ನಿಯಮ ಉಲ್ಲಂಘಿಸಿದರೆ 2000 ರೂ.ದಂಡ 7 ವರ್ಷ ಶಿಕ್ಷೆ....

SHARE......LIKE......COMMENT......

ನವದೆಹಲಿ:

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಮತ್ತೊಮ್ಮೆ ಭಾರೀ ಆಘಾತ ನೀಡಲು ಸರ್ಕಾರ ಮುಂದಾಗಿದ್ದು, ಇನ್ನೂ ಮುಂದೆ ಕೊಪ್ಟಾ ಕಾಯ್ದೆಯನ್ನು ಉಲ್ಲಂಘಿಸಿದರೆ 2 ಸಾವಿರ ರೂಪಾಯಿ ದಂಡ ಮತ್ತು ಏಳು ವರ್ಷ ಶಿಕ್ಷೆ ವಿಧಿಸುವ ಚಿಂತನೆ ನಡೆಸಿದೆ. ಈಗಾಗಲೇ ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಸಾವಿರಾರು ರೂಪಾಯಿ ದಂಡ ಹೆಚ್ಚಿಸಿ ಜನಾಕ್ರೋಶಕ್ಕೆ ಕಾರಣವಾಗಿದ್ದ ಸರ್ಕಾರ ತೀವ್ರ ವಿರೋಧ ವ್ಯಕ್ತವಾದ ಬಳಿಕ ಅದನ್ನು ಕಡಿಮೆ ಮಾಡಿತ್ತು. ಕರ್ನಾಟಕದಲ್ಲಿ ಮಾಸ್ಕ್ ಧರಿಸದೆ ಇರುವವರಿಗೆ ದಂಡವನ್ನು ಹೆಚ್ಚಳ ಮಾಡಿ ತೀವ್ರ ವಿರೋಧದ ಬಳಿಕ ಕಡಿಮೆ ಮಾಡಲಾಯಿತು. ಹಲವು ದಂಡಗಳಿಂದ ಸಾರ್ವಜನಿಕರು ಹೈರಾಣಾಗಿರುವ ನಡುವೆ ಧೂಮಪಾನಿಗಳಿಗೆ ಬರೆ ಹಾಕಲು ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ 2003ಕ್ಕೆ ತಿದ್ದುಪಡಿ ತಂದು ಈಗಿರುವ 200 ರೂ.ದಂಡವನ್ನು 2000 ರೂ.ಗೆ ಹೆಚ್ಚಿಸಲು ಚಿಂತನೆ ನಡೆಸಿದೆ.

ಸಿಗರೇಟ್ ಖರೀದಿಸುವವರ ವಯಸ್ಸಿನ ಮಿತಿಯನ್ನು 18 ರಿಂದ 21ಕ್ಕೆ ಹೆಚ್ಚಿಸಲು ಮತ್ತು ಬಿಡಿ ಬಿಡಿ ಸಿಗರೇಟು ಮಾರಾಟ ಮಾಡುವುದನ್ನು ನಿಷೇಧಿಸಲು ಕೂಡ ಕಾಯ್ದೆಯಲ್ಲಿ ಸೇರ್ಪಡೆ ಮಾಡಲಾಗುತ್ತಿದೆ. ಈವರೆಗೂ ಕಾಯ್ದೆಯನ್ನು ಉಲ್ಲಂಘನೆ ಮಾಡಿದವರಿಗೆ 6 ತಿಂಗಳಿನಿಂದ 2 ವರ್ಷಗಳವರೆಗೆ ಶಿಕ್ಷೆ ವಿಧಿಸುವ ಅವಕಾಶವಿತ್ತು. ಆದರೆ ನೂತನ ಕಾಯ್ದೆಯಲ್ಲಿ 7 ವರ್ಷಗಳವರೆಗೂ ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲು ಚಿಂತನೆ ನಡೆದಿದೆ.

ಇತ್ತೀಚೆಗೆ ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ ಮತ್ತು ಎಲ್ಲೆಂದರಲ್ಲಿ ಉಗಿಯುವವರಿಗೆ ದಂಡ ವಿಧಿಸುವ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು, ಅದು ಸ್ವಲ್ಪಮಟ್ಟಿಗೆ ಯಶಸ್ವಿಯಾಗಿದೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ಹಾವಳಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಬಸ್, ರೈಲು ನಿಲ್ದಾಣಗಳಲ್ಲಿ, ಸಿನಿಮಾ ಮಂದಿರಗಳಲ್ಲಿ, ಸಾರ್ವಜನಿಕ ಸಂಪರ್ಕ ವಾಹನಗಳಲ್ಲಿ, ಹೊಟೇಲ್, ಮಾಲ್‍ಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧ ಜಾರಿಯಲ್ಲಿದೆ, ಆದರೆ ರಸ್ತೆ ಬದಿಯ ಅಂಗಡಿಗಳಲ್ಲಿ ಸಾರ್ವಜನಿಕವಾಗಿ ಧೂಮಪಾನ ನಡೆಯುತ್ತಿದೆ.

ಇನ್ನು ಕೆಲವರು ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣ ಮಾಡುವಾಗ ರಸ್ತೆಗಳಲ್ಲೇ ಧೂಮಪಾನ ಮಾಡಿಕೊಂಡು ಹೋಗುತ್ತಿರುವುದು ಸಾಮಾನ್ಯವಾಗಿದ್ದು ಸಾರ್ವಜನಿಕರಿಗೆ ಕಿರಿಕಿರಿಯ ವಾತಾವರಣ ಸೃಷ್ಟಿಸುತ್ತಿದೆ. ಒಂದು ವೇಳೆ ಪ್ರಸ್ತಾವಿತ ಕಾಯ್ದೆ ಜಾರಿಗೆ ಬಂದು 2 ಸಾವಿರ ರೂ. ದಂಡ ಹೆಚ್ಚಳವಾದರೆ ಅದಕ್ಕೆ ಸಾರ್ವಜನಿಕ ವಲಯದಿಂದ ಮತ್ತೊಂದು ಸುತ್ತಿನ ಭಾರೀ ವಿರೋಧ ವ್ಯಕ್ತವಾಗುವ ಸಾಧ್ಯತೆಗಳೂ ಇವೆ……