ಕ್ರೀಡೆ:
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನ ದಶಕದ ಪುರುಷರ ಏಕದಿನ ತಂಡದ ನಾಯಕನನ್ನಾಗಿ ಆಯ್ಕೆ ಮಾಡಿದೆ. ಧೋನಿ ನೇತೃತ್ವದ ತಂಡದಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಇದ್ದಾರೆ. ತಂಡದಲ್ಲಿ ಡೇವಿಡ್ ವಾರ್ನರ್ ಮತ್ತು ರೋಹಿತ್ರನ್ನು ಆರಂಭಿಕ ಬ್ಯಾಟ್ಸ್ಮನ್ಗ್ಗಳಾಗಿ ಆಯ್ಕೆ ಮಾಡಲಾಗಿದ್ದು, ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅವರನ್ನ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಆಗಿ ಆಯ್ಕೆ ಮಾಡಲಾಗಿದೆ……