Breaking News

ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಪಟ್ಟಿ ನಾಳೆ ಬಿಡುಗಡೆ..!

25 ಸ್ಥಾನಗಳಿಗೆ ನಡೆಯುವ ಚುನಾವಣೆ....

SHARE......LIKE......COMMENT......

ಬೆಂಗಳೂರು:

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದ್ದು , ನಾಳೆ ಸಂಜೆಯೊಳಗೆ ಪ್ರಕಟವಾಗುವ ಸಾಧ್ಯತೆಗಳಿವೆ. 25 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಧಿಸಲು ಜೆಡಿಎಸ್ ತೀರ್ಮಾನಿಸಿದೆ. ಮಂಡ್ಯದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಅವರಿಗೆ ಟಿಕೆಟ್ ನೀಡವುದು ಬಹುತೇಕ ಖಚಿತ.

ಹಾಸನದಿಂದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪುತ್ರ ಡಾ.ಸೂರಜ್ ಅವರಿಗೆ ಟಿಕೆಟ್ ನೀಡುವುದು ಖಚಿತವಾಗಿದೆ. ನಾಳೆ ವಿಧಾನ ಪರಿಷತ್ತಿನ ಚುನಾವಣೆಗೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಹೀಗಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟಂಬದಿಂದ ಮತ್ತೊಬ್ಬರು ರಾಜಕೀಯ ಪ್ರವೇಶ ಮಾಡಿದಂತಾಗಲಿದೆ.

ತುಮಕೂರು, ಮೈಸೂರು, ಕೋಲಾರ ಕ್ಷೇತ್ರಗಳನ್ನು ಪ್ರತಿನಿಸಿದ್ದ ಜೆಡಿಎಸ್‍ನ ಮೂವರು ವಿಧಾನ ಪರಿಷತ್ ಸದಸ್ಯರು ಪಕ್ಷ ತೊರೆಯುತ್ತಿರುವ ಹಿನ್ನೆಲೆಯಲ್ಲಿ ಬದಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ತುಮಕೂರಿನಿಂದ ಮಾಜಿ ಸಚಿವ ಚನ್ನಿಗಪ್ಪ ಅವರ ಪುತ್ರ ವೇಣುಗೋಪಾಲ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಗಳಿವೆ. ಕೋಲಾರದಿಂದ ವಿಧಾನ ಪರಿಷತ್ ಸದಸ್ಯ ರಮೇಶ್‍ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯಚೌಡರೆಡ್ಡಿ ತೂಪಲ್ಲಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೆಸರು ಚಾಲ್ತಿಯಲ್ಲಿದ್ದು ಖಚಿತವಾಗಿಲ್ಲ. ಇಂದು ರಾತ್ರಿ ವೇಳೆಗೆ ವಿಧಾನ ಪರಿಷತ್ತಿನ ಚುನಾವಣೆಗೆ ಸ್ಪರ್ಧೆಗಿಳಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ವರಿಷ್ಠರು ಅಂತಿಮ ಮಾಡಲಿದ್ದಾರೆ. ಈಗಗಾಲೇ ಅಂತಿಮಗೊಳಿಸಿರುವ ಕ್ಷೇತ್ರಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸೇರಿದಂತೆ ಜೆಡಿಎಸ್ ನಾಯಕರು ನಿರಂತರ ಸಮಾಲೋಚನೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುತ್ತಿದ್ದಾರೆ……