ಬೆಂಗಳೂರು:
ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಸೋಲಿನ ಭಯದಲ್ಲಿದೆ. ಪಂದ್ಯದ ಮೊದಲ ಮೂರು ದಿನಗಳವರೆಗೂ ಗೆಲುವಿನ ಬಹುದೊಡ್ಡ ಸ್ಪರ್ಧಿ ಎಂದೇ ಬಿಂಬಿತವಾಗಿದ್ದ ಟೀಂ ಇಂಡಿಯಾ ನಾಲ್ಕನೇ ದಿನದಾಟದ ನಂತರ ಗೆಲುವಿನಿಂದ ದೂರ ಸಾಗಿದೆ. ಟೀಂ ಇಂಡಿಯಾದ ಈ ಕೆಟ್ಟ ಪರಿಸ್ಥಿತಿಗೆ ಮೂವರು ಆಟಗಾರರ ಕಳಪೆ ಪ್ರದರ್ಶನವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಆಟಗಾರರು ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಸಂಪೂರ್ಣವಾಗಿ ಕಳಪೆ ಫಾರ್ಮ್‌ನಲ್ಲಿದ್ದು ಆಟವಾಡಿದ್ದರು. ಇವಿಷ್ಟೇ ಅಲ್ಲ, ಈ ಆಟಗಾರರು ಮೊದಲ ಇನಿಂಗ್ಸ್‌ನಲ್ಲೂ ಸಾಕಷ್ಟು ನಿರಾಸೆ ಮೂಡಿಸಿದ್ದನ್ನು ನಾವು ನೋಡಿದ್ದೇವೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹನುಮ ವಿಹಾರಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಉತ್ತಮವಾಗಿ ಮಾಡಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 20 ರನ್ ಗಳಿಸಿ ಔಟಾದ ಅವರು, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 11 ರನ್ ಬಾರಿಸಿದ್ದಾರೆ. ಇಷ್ಟೇ ಅಲ್ಲ, ಪಂದ್ಯದ ನಾಲ್ಕನೇ ದಿನದಂದು ಇಂಗ್ಲೆಂಡ್‌ನ ಅಪಾಯಕಾರಿ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋ ಅವರ ಕ್ಯಾಚ್ ಅನ್ನು ಹನುಮ ವಿಹಾರಿ ಕೈಬಿಟ್ಟಿದ್ದರು. ಆಗ ಜಾನಿ ಬೈರ್‌ಸ್ಟೋವ್ 14 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದು, ಈಗ 72 ರನ್‌ಗಳ ಇನಿಂಗ್ಸ್‌ನಲ್ಲಿ ಅಜೇಯರಾಗಿ ತಂಡವನ್ನು ಗೆಲುವಿನ ಸಮೀಪಕ್ಕೆ ತರುತ್ತಿದ್ದಾರೆ.
ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್‌ರಂತಹ ಬ್ಯಾಟ್ಸ್‌ಮನ್‌ಗಳನ್ನು ಕೈಬಿಡುವ ಮೂಲಕ ಶ್ರೇಯಸ್ ಅಯ್ಯರ್‌ಗೆ ಪ್ಲೇಯಿಂಗ್ XI ನಲ್ಲಿ ಆಡುವ ಅವಕಾಶ ನೀಡಲಾಗಿತ್ತು. ಆದರೆ ಶ್ರೇಯಸ್ ಅಯ್ಯರ್ ತಂಡದ ನಂಬಿಕೆಯನ್ನು ಉಳಿಸಿಕೊಂಡಿಲ್ಲ. ಅಯ್ಯರ್ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 15 ರನ್ ಗಳಿಸಿ ಔಟಾದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 19 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಶ್ರೇಯಸ್ ಅಯ್ಯರ್ ಕೆಳ ಕ್ರಮಾಂಕದಲ್ಲಿ ತಂಡದ ಬ್ಯಾಟಿಂಗ್ ಅನ್ನು ನಿಭಾಯಿಸುವ ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದರು. ಆದರೆ ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ.
ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಮಾರಕ ಬೌಲಿಂಗ್ ಜೊತೆಗೆ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಆದರೆ ಈ ಟೆಸ್ಟ್ ಪಂದ್ಯದಲ್ಲಿ ಕೇವಲ ಬೆರಳೆಣಿಕೆ ರನ್ ಬಾರಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶಾರ್ದೂಲ್ ಠಾಕೂರ್ ಕೇವಲ 1 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 4 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಬೌಲಿಂಗ್ ವಿಚಾರಕ್ಕೆ ಬಂದರೆ ಇದುವರೆಗೆ ಒಂದೇ ಒಂದು ವಿಕೆಟ್ ಪಡೆದಿಲ್ಲ. ಈ ಮೂವರು ಆಟಗಾರರ ಕಳಪೆ ಪ್ರದರ್ಶನ ಇದೀಗ ಟೀಂ ಇಂಡಿಯಾವನ್ನು ಸೋಲಿನ ಸುಳಿಗೆ ಸಿಲುಕುವಂತೆ ಮಾಡಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಹೇಳುತ್ತಿದ್ದಾರೆ……