Breaking News

ಇನ್ನೂ 2 ದಿನ ಬೆಂಗಳೂರಿನಲ್ಲಿ ಭಾರೀ ಮಳೆ..!

ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ....

SHARE......LIKE......COMMENT......

ಬೆಂಗಳೂರು:

ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ……