Breaking News

ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆ..!

17 ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ....

SHARE......LIKE......COMMENT......

ಬೆಂಗಳೂರು:

ರಾಜ್ಯದಲ್ಲಿ ಮುಂದಿನ ಮೂರು ದಿನ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 17 ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಉಂಟಾಗಲಿದೆ. ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದಲ್ಲಿ ಮುಂದುವರೆದಿರೋ ಒಣ ಹವೆ, 18 ರಿಂದ 20ರ ವರೆಗೆ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ……