ವಿಶಾಖಪಟ್ಟಣ:
ಆಂಧ್ರ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಈ ದುರಂತದಲ್ಲಿ ಇಬ್ಬರು ಪುಟ್ಟ ಮಕ್ಕಳು ಸೇರಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಇನ್ನೂರಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೆಲ್ಲರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದೇಶದಾದ್ಯಂತ ಕೊರೋನಾ ತಾಂಡವವಾಡುತ್ತಿದ್ದು, ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೀಗ ಈ ಸಂಕಟದ ಬೆನ್ನಲ್ಲೇ ವಿಶಾಖಪಟ್ಟಣಂನ ಆರ್ಆರ್ ವೆಂಕಟಾಪುರಂ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ.
ಇಲ್ಲಿನ ಎಲ್ಜಿ ಪಾಲಿಮರ್ಸ್ ಇಂಡಸ್ಟ್ರಿ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಆಸುಪಾಸಿನ ಪ್ರದೇಶಕ್ಕೆ ವಿಷಾನಿಲ ಹರಡಿದೆ. ಇದರಿಂದ ಮುಂಜಾನೆ ವಾಕಿಂಗ್ಗೆ ಹೊರಗೆ ಬಂದಿದ್ದ ಅನೇಕ ಮಂದಿ ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಬೇಕಾದ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ……